Search This Blog
Thursday, November 29, 2018
Sunday, November 25, 2018
Wednesday, November 21, 2018
Wednesday, November 14, 2018
Saturday, November 10, 2018
Friday, November 9, 2018
![]() | |
|---|---|
| ಜನನ: | ನವೆಂಬರ್ ೧೪, ೧೮೮೯ |
| ಮರಣ: | ಮೇ ೨೭, ೧೯೬೪ |
| ಹುಟ್ಟಿದೂರು: | ಅಲಹಾಬಾದ್, ಉತ್ತರ ಪ್ರದೇಶ |
| ಭಾರತದ ಪ್ರಧಾನ ಮಂತ್ರಿ | |
| ಅಧಿಕಾರ ಅವಧಿ: | ಮೊಟ್ಟ ಮೊದಲ ಪ್ರಧಾನ ಮಂತ್ರಿ |
| ರಾಜಕೀಯ ಪಕ್ಷ: | ಭಾರತ ರಾಷ್ಟ್ರೀಯ ಕಾಂಗ್ರೆಸ್ |
| ಅಧಿಕಾರ ವಹಿಸಿಕೊಂಡಿದ್ದು: | ಆಗಸ್ಟ್ ೧೫, ೧೯೪೭ |
| ಅಧಿಕಾರ ಬಿಟ್ಟುಕೊಟ್ಟಿದ್ದು: | ಮೇ ೨೭, ೧೯೬೪ |
| ಇವರ ಉತ್ತರಾಧಿಕಾರಿ: | ಗುಲ್ಜಾರಿಲಾಲ್ ನಂದ |
ಜವಾಹರಲಾಲ್ ನೆಹರು (ನವೆಂಬರ್ ೧೪, ೧೮೮೯ - ಮೇ ೨೭, ೧೯೬೪) - ಭಾರತದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರು. ಆಗಸ್ಟ್ ೧೫, ೧೯೪೭ ರಿಂದ ಪ್ರಾರಂಭಿಸಿ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.
ಪರಿವಿಡಿ
ನೆಹರುರವರ ಸಾರ್ವಜನಿಕ ಜೀವನ೧೮೮೯-೧೯೧೮[ಬದಲಾಯಿಸಿ]
- ಪಂ, ಜವಹರಲಾಲ್ ನೆಹರು, ಆಗಿನ ಕಾಲದ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಮೋತಿಲಾಲ್ ನೆಹರು ಅವರ ಮಗ. ನೆಹರೂ ಇಂಗ್ಲೆಂಡ್‌ನ ಹ್ಯಾರ್ರೊ ಸ್ಕೂಲ್ ಹಾಗು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಓದು ಮುಗಿಸಿ, ತಂದೆಯೊಂದಿಗೆ ರಾಜಕೀಯದಲ್ಲಿ ಸಕ್ರಿಯರಾದರು.
- ಇಂಗ್ಲೆಂಡ್‌ನಲ್ಲಿದ್ದಾಗ ನೆಹರು ಅವರು ಫೇಬಿಯನ್ ಸಾಮಾಜಿಕ ವಿಧಾನಗಳನ್ನು ಬಹುವಾಗಿ ಮೆಚ್ಚಿದ್ದರು. ೧೯೧೬ರ ವಸಂತ ಪಂಚಮಿಯ ದಿನದಂದು ನೆಹರು ಅವರು ಕಮಲಾ ಕೌಲ್‌ರವರನ್ನು ಮದುವೆಯಾದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ೧೯೧೮-೧೯೩೭[ಬದಲಾಯಿಸಿ]
೧೯೧೯ ರಲ್ಲಿ ಮಗಳು ಇಂದಿರಾ ಪ್ರಿಯದರ್ಶಿನಿ ಜನಿಸಿದಳು. ರಾಜಕೀಯದಲ್ಲಿ, ಮಹಾತ್ಮ ಗಾಂಧಿಯವರ ಶಿಷ್ಯನಾದ ಇವರು, ಮೊದಲ ಬಾರಿಗೆ ೧೯೨೯ ರಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮೇಲೇರಿದರು. ಈ ದಿನಗಳನ್ನು ಇವರು ಬಹುವಾಗಿ ಕಾರಾಗೃಹವಾಸ ದಲ್ಲಿ ಪುಸ್ತಕಗಳು, ಪತ್ರಗಳನ್ನು ಬರೆಯುತ್ತಾ ಕಳೆದರು.
ಕ್ವಿಟ್ ಇಂಡಿಯ ಆಂದೋಲನದಲ್ಲಿ ೧೯೩೭-೧೯೪೭[ಬದಲಾಯಿಸಿ]
'ಭಾರತವನ್ನು ಬಿಟ್ಟು ತೊಲಗಿ' (Quit India Movement) ಪರ್ಯಾಯ ೧೯೪೨ರಲ್ಲಿ ೩೨ ತಿಂಗಳಿಗೆ ಕಾರಾಗೃಹವಾಸ ಅನುಭವಿಸಿದ ಇವರು, ಭಾರತದ ಮೊದಲ ಸರಕಾರವನ್ನು ೧೯೪೬ರಲ್ಲಿ ರಚಿಸಿದರು.
ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ೧೯೪೭-೧೯೬೪[ಬದಲಾಯಿಸಿ]
ನೆಹರೂರವರು ೧೮ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದರು. ಇವರು ೧೯೬೪ರ ಮೇ ೨೭ ರಂದು ನಿಧನರಾದರು. ಪಂಡಿತ ಜವಹರಲಾಲ್ ನೆಹರೂರವರು ಆಗಸ್ಟ್ ೧೪ ರ ಮಧ್ಯರಾತ್ರಿ, ಸಂಸತ್ತನ್ನುದ್ದೇಶಿಸಿ ಮಾಡಿದ 'ಎ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣದ ಕನ್ನಡ ಅನುವಾದ' : "ಹಿಂದೊಮ್ಮೆ ನಾವು ವಿಧಿಗೊಂದು ಮಾತಿತ್ತಿದ್ದೆವು. ಅ ಭಾಷೆಯನ್ನು ಕೇವಲ ಸಂಪೂರ್ಣವಾಗಿಯಲ್ಲದೇ ಮಹತ್ತರವಾಗಿ ಕಾರ್ಯಗತಗೊಳಿಸುವ ಸಮಯವಿಂದೊದಗಿದೆ. ಈ ನಡು ರಾತ್ರಿಯ ವಿಶೇಷ ಘಳಿಗೆಯಲ್ಲಿ, ಇಡೀ ವಿಶ್ವ ನಿದ್ರಿಸುತ್ತಿರುವಾಗ, ಭಾರತ ಸ್ವಾತಂತ್ರ್ಯವನ್ನು ಮೈದಳೆದು ಮೇಲೇಳಲಿದೆ. ಹಳೆತೆಲ್ಲವನ್ನೊದರಿ ಹೊಸತನಕ್ಕೆ ಕಾಲಿಡುವ ಮತ್ತು ಶತಮಾನಗಳಿಂದ ಶೋಷಿಸಲ್ಪಟ್ಟ ನಾಡಿನಾತ್ಮ ಧ್ವನಿದಳೆವ ಈ ಘಳಿಗೆ, ಇತಿಹಾಸದ ಅಪರೂಪದ ಮುಹೂರ್ತಗಳಲ್ಲೊಂದು. ಈ ಶುದ್ಧ ಸಮಯದಲ್ಲಿ ಭಾರತದ ಮತ್ತು ಭಾರತಾಂಬೆಯ ಸತ್ಪ್ರಜೆಗಳ ಸೇವೆಗಾಗಿ, ಹೆಚ್ಚೇನು ವಿಶ್ವದೊಳಿತಿಗಾಗಿ ನಮ್ಮದೆಲ್ಲವನ್ನು ಮುಡಿಪಿಡುವುದಾಗಿ ಮಾಡುವ ಪ್ರತಿಜ್ಞೆ ಅತೀ ಸಮರ್ಪಕವೆನಿಸುತ್ತದೆ."
ನೆಹರೂ ಅವರ ಅಂತಿಮ ಕವನ/ಬಯಕೆ[ಬದಲಾಯಿಸಿ]
- ಜವಾಹರಲಾಲ್ ನೆಹರೂ ಮೃತರಾದಾಗ ಅವರ ಪಕ್ಕದಲ್ಲಿ ಈ ಕವನದ ಸಾಲುಗಳನ್ನು ಗೀಚಿದ ಕಾಗದದ ತುಣುಕು ದೊರಕಿತ್ತು.
-
- ಕಾಡೂ ಸುಂದರವಾಗಿದೆ, ದಟ್ಟ ಕತ್ತಲೆಯಿಂದ ಕೂಡಿದೆ.
- ಆದರೆ, ನಾನು ಮಾತುಗಳನ್ನು ಉಳಿಸಿಕೊಳ್ಳಬೇಕಿದೆ.
- ನಿದ್ದೆಗೆ ಜಾರುವ ಮುನ್ನ ಮೈಲುಗಟ್ಟಲೆ ಕ್ರಮಿಸಬೇಕಿದೆ, ಮೈಲುಗಟ್ಟಲೆ ಕ್ರಮಿಸಬೇಕಿದೆ.
Monday, November 5, 2018
Sunday, November 4, 2018
Saturday, November 3, 2018
Subscribe to:
Posts (Atom)
Featured Post
-
ಕರ್ನಾಟಕ ಸರ್ಕಾರವು 2026ನೇ ಸಾಲಿನ ಸರ್ಕಾರಿ ರಜೆ ಪಟ್ಟಿಯನ್ನು ಜನರ ಮಾಹಿತಿಗಾಗಿ ಬಿಡುಗಡೆ ಮಾಡಿದೆ. ಕರ್ನಾಟಕ ಸರ್ಕಾರ ಇಂದು(ಗುರುವಾರ) 2026ನೇ ಸಾಲಿಗೆ ಮಂಜೂರು ಮಾಡಿರು...




















