Search This Blog

Friday, November 9, 2018

ಜವಾಹರಲಾಲ್ ನೆಹರು
ಜವಾಹರಲಾಲ್ ನೆಹರು
ಜನನ:ನವೆಂಬರ್ ೧೪೧೮೮೯
ಮರಣ:ಮೇ ೨೭೧೯೬೪
ಹುಟ್ಟಿದೂರು:ಅಲಹಾಬಾದ್ಉತ್ತರ ಪ್ರದೇಶ
ಭಾರತದ ಪ್ರಧಾನ ಮಂತ್ರಿ
ಅಧಿಕಾರ ಅವಧಿ:ಮೊಟ್ಟ ಮೊದಲ ಪ್ರಧಾನ ಮಂತ್ರಿ
ರಾಜಕೀಯ ಪಕ್ಷ:ಭಾರತ ರಾಷ್ಟ್ರೀಯ ಕಾಂಗ್ರೆಸ್
ಅಧಿಕಾರ ವಹಿಸಿಕೊಂಡಿದ್ದು:ಆಗಸ್ಟ್ ೧೫೧೯೪೭
ಅಧಿಕಾರ ಬಿಟ್ಟುಕೊಟ್ಟಿದ್ದು:ಮೇ ೨೭೧೯೬೪
ಇವರ ಉತ್ತರಾಧಿಕಾರಿ:ಗುಲ್ಜಾರಿಲಾಲ್ ನಂದ
'ಮಹಾತ್ಮಗಾಂಧಿಯೊಂದಿಗೆ ನೆಹರು'
'ರಾಷ್ಟ್ರಕ್ಕೆ ಸಮರ್ಪಿಸಿದ ನೆಹರೂ ವಂಶದ ಮನೆ'
ಜವಾಹರಲಾಲ್ ನೆಹರು (ನವೆಂಬರ್ ೧೪೧೮೮೯ - ಮೇ ೨೭೧೯೬೪) - ಭಾರತದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರು. ಆಗಸ್ಟ್ ೧೫೧೯೪೭ ರಿಂದ ಪ್ರಾರಂಭಿಸಿ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.

ನೆಹರುರವರ ಸಾರ್ವಜನಿಕ ಜೀವನ೧೮೮೯-೧೯೧೮[ಬದಲಾಯಿಸಿ]

  • ಪಂ, ಜವಹರಲಾಲ್ ನೆಹರು, ಆಗಿನ ಕಾಲದ ಪ್ರಮುಖ ಕಾಂಗ್ರೆಸ್ ನಾಯಕರಾಗಿದ್ದ ಮೋತಿಲಾಲ್ ನೆಹರು ಅವರ ಮಗ. ನೆಹರೂ ಇಂಗ್ಲೆಂಡ್‌ನ ಹ್ಯಾರ್ರೊ ಸ್ಕೂಲ್ ಹಾಗು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಓದು ಮುಗಿಸಿ, ತಂದೆಯೊಂದಿಗೆ ರಾಜಕೀಯದಲ್ಲಿ ಸಕ್ರಿಯರಾದರು.
  • ಇಂಗ್ಲೆಂಡ್‌ನಲ್ಲಿದ್ದಾಗ ನೆಹರು ಅವರು ಫೇಬಿಯನ್ ಸಾಮಾಜಿಕ ವಿಧಾನಗಳನ್ನು ಬಹುವಾಗಿ ಮೆಚ್ಚಿದ್ದರು. ೧೯೧೬ರ ವಸಂತ ಪಂಚಮಿಯ ದಿನದಂದು ನೆಹರು ಅವರು ಕಮಲಾ ಕೌಲ್‌ರವರನ್ನು ಮದುವೆಯಾದರು.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ೧೯೧೮-೧೯೩೭[ಬದಲಾಯಿಸಿ]

೧೯೧೯ ರಲ್ಲಿ ಮಗಳು ಇಂದಿರಾ ಪ್ರಿಯದರ್ಶಿನಿ ಜನಿಸಿದಳು. ರಾಜಕೀಯದಲ್ಲಿ, ಮಹಾತ್ಮ ಗಾಂಧಿಯವರ ಶಿಷ್ಯನಾದ ಇವರು, ಮೊದಲ ಬಾರಿಗೆ ೧೯೨೯ ರಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮೇಲೇರಿದರು. ಈ ದಿನಗಳನ್ನು ಇವರು ಬಹುವಾಗಿ ಕಾರಾಗೃಹವಾಸ ದಲ್ಲಿ ಪುಸ್ತಕಗಳು, ಪತ್ರಗಳನ್ನು ಬರೆಯುತ್ತಾ ಕಳೆದರು.

ಕ್ವಿಟ್ ಇಂಡಿಯ ಆಂದೋಲನದಲ್ಲಿ ೧೯೩೭-೧೯೪೭[ಬದಲಾಯಿಸಿ]

'ಭಾರತವನ್ನು ಬಿಟ್ಟು ತೊಲಗಿ' (Quit India Movement) ಪರ್ಯಾಯ ೧೯೪೨ರಲ್ಲಿ ೩೨ ತಿಂಗಳಿಗೆ ಕಾರಾಗೃಹವಾಸ ಅನುಭವಿಸಿದ ಇವರು, ಭಾರತದ ಮೊದಲ ಸರಕಾರವನ್ನು ೧೯೪೬ರಲ್ಲಿ ರಚಿಸಿದರು.

ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ ೧೯೪೭-೧೯೬೪[ಬದಲಾಯಿಸಿ]

ನೆಹರೂರವರು ೧೮ ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದರು. ಇವರು ೧೯೬೪ರ ಮೇ ೨೭ ರಂದು ನಿಧನರಾದರು. ಪಂಡಿತ ಜವಹರಲಾಲ್ ನೆಹರೂರವರು ಆಗಸ್ಟ್ ೧೪ ರ ಮಧ್ಯರಾತ್ರಿ, ಸಂಸತ್ತನ್ನುದ್ದೇಶಿಸಿ ಮಾಡಿದ 'ಎ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣದ ಕನ್ನಡ ಅನುವಾದ' : "ಹಿಂದೊಮ್ಮೆ ನಾವು ವಿಧಿಗೊಂದು ಮಾತಿತ್ತಿದ್ದೆವು. ಅ ಭಾಷೆಯನ್ನು ಕೇವಲ ಸಂಪೂರ್ಣವಾಗಿಯಲ್ಲದೇ ಮಹತ್ತರವಾಗಿ ಕಾರ್ಯಗತಗೊಳಿಸುವ ಸಮಯವಿಂದೊದಗಿದೆ. ಈ ನಡು ರಾತ್ರಿಯ ವಿಶೇಷ ಘಳಿಗೆಯಲ್ಲಿ, ಇಡೀ ವಿಶ್ವ ನಿದ್ರಿಸುತ್ತಿರುವಾಗ, ಭಾರತ ಸ್ವಾತಂತ್ರ್ಯವನ್ನು ಮೈದಳೆದು ಮೇಲೇಳಲಿದೆ. ಹಳೆತೆಲ್ಲವನ್ನೊದರಿ ಹೊಸತನಕ್ಕೆ ಕಾಲಿಡುವ ಮತ್ತು ಶತಮಾನಗಳಿಂದ ಶೋಷಿಸಲ್ಪಟ್ಟ ನಾಡಿನಾತ್ಮ ಧ್ವನಿದಳೆವ ಈ ಘಳಿಗೆ, ಇತಿಹಾಸದ ಅಪರೂಪದ ಮುಹೂರ್ತಗಳಲ್ಲೊಂದು. ಈ ಶುದ್ಧ ಸಮಯದಲ್ಲಿ ಭಾರತದ ಮತ್ತು ಭಾರತಾಂಬೆಯ ಸತ್ಪ್ರಜೆಗಳ ಸೇವೆಗಾಗಿ, ಹೆಚ್ಚೇನು ವಿಶ್ವದೊಳಿತಿಗಾಗಿ ನಮ್ಮದೆಲ್ಲವನ್ನು ಮುಡಿಪಿಡುವುದಾಗಿ ಮಾಡುವ ಪ್ರತಿಜ್ಞೆ ಅತೀ ಸಮರ್ಪಕವೆನಿಸುತ್ತದೆ."

ನೆಹರೂ ಅವರ ಅಂತಿಮ ಕವನ/ಬಯಕೆ[ಬದಲಾಯಿಸಿ]

  • ಜವಾಹರಲಾಲ್‌ ನೆಹರೂ ಮೃತರಾದಾಗ ಅವರ ಪಕ್ಕದಲ್ಲಿ ಈ ಕವನದ ಸಾಲುಗಳನ್ನು ಗೀಚಿದ ಕಾಗದದ ತುಣುಕು ದೊರಕಿತ್ತು.
ಕಾಡೂ ಸುಂದರವಾಗಿದೆ, ದಟ್ಟ ಕತ್ತಲೆಯಿಂದ ಕೂಡಿದೆ.
ಆದರೆ, ನಾನು ಮಾತುಗಳನ್ನು ಉಳಿಸಿಕೊಳ್ಳಬೇಕಿದೆ.
ನಿದ್ದೆಗೆ ಜಾರುವ ಮುನ್ನ ಮೈಲುಗಟ್ಟಲೆ ಕ್ರಮಿಸಬೇಕಿದೆ, ಮೈಲುಗಟ್ಟಲೆ ಕ್ರಮಿಸಬೇಕಿದೆ.

No comments: