Search This Blog

Sunday, March 14, 2021

ಜ್ಞಾನಪೀಠ ಪ್ರಶಸ್ತಿ

 ಜ್ಞಾನಪೀಠ ಪ್ರಶಸ್ತಿ – 1965-1974


ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಟಿತ ಪ್ರಶಸ್ತಿ.

ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.

ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು. ಈ ಪ್ರಶಸ್ತಿಯನ್ನು ಪ್ರಪ್ರಥಮವಾಗಿ ೧೯೬೫ರಲ್ಲಿ ಮಲೆಯಾಳಂ ಲೇಖಕ ಜಿ. ಶಂಕರ ಕುರುಪರಿಗೆ ಪ್ರದಾನ ಮಾಡಲಾಯಿತು.

ವಿಜೇತರಿಗೆ ಪ್ರಶಸ್ತಿ ಫಲಕ, ೧೧ ಲಕ್ಷ ರೂಪಾಯಿ ಚೆಕ್ ಹಾಗೂ ವಾಗ್ದೇವಿಯ ಕಂಚಿನ ವಿಗ್ರಹವನ್ನು ನೀಡಿ ಗೌರವಿಸಲಾಗುವುದು.

ಈ ಪ್ರಶಸ್ತಿಯನ್ನು ಸರಕಾರ ನೀಡುತ್ತದೆ ಎಂಬ ತಪ್ಪು ಕಲ್ಪನೆಯೂ ವ್ಯಾಪಕವಾಗಿದೆ.

ವಾಸ್ತವದಲ್ಲಿ ಈ ಪ್ರಶಸ್ತಿಯನ್ನು ನೀಡುವವರು ಜ್ಞಾನಪೀಠ ಟ್ರಸ್ಟ್.

ಟೈಂಸ್ ಆಫ್ ಇಂಡಿಯಾದ ಒಡೆತನವನ್ನು ಹೊಂದಿರುವ ಜೈನ್ ಕುಟುಂಬ ಜ್ಞಾನಪೀಠ ಟ್ರಸ್ಟ್ ನ ಸ್ಥಾಪಕರು. ಈಗಲೂ ಅದರ ಸದಸ್ಯರಲ್ಲಿ ಹೆಚ್ಚಿನವರು ಈ ಕುಟುಂಬಕ್ಕೆ ಸೇರಿದ್ದಾರೆ.

೧೯೮೨ ರಿಂದ, ಈ ಪ್ರಶಸ್ತಿಯನ್ನು ಭಾರತೀಯ ಸಾಹಿತ್ಯಕ್ಕೆ ಸಮಗ್ರ ಕೊಡುಗೆಯನ್ನು ನೀಡಿದ ಲೇಖಕರಿಗೆ ಸಂದಾಯವಾಗುತ್ತಿದೆ.

ಈವರೆಗೆ ಹಿಂದಿ ಸಾಹಿತಿಗಳು ಹನ್ನೊಂದು ಪ್ರಶಸ್ತಿಗಳನ್ನು ಪಡೆದು ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ.

ಕನ್ನಡ ಭಾಷೆಯು ಎಂಟು ಪ್ರಶಸ್ತಿಯನ್ನು ಪಡೆದು ಎರಡನೆ ಸ್ಥಾನದಲ್ಲಿದೆ.

೧೯೮೨ರಿಂದ ಒಂದು ಕೃತಿಯ ಬದಲಿಗೆ ಸಮಗ್ರ ಸಾಹಿತ್ಯದ ಕೊಡುಗೆಯನ್ನು ಗಮನಿಸಿ ನೀಡಲಾಗುತ್ತಿದೆ

No comments:

Featured Post

SBI'ನೊಂದಿಗೆ ಈ ಅದ್ಭುತ ಬ್ಯುಸಿನೆಸ್ ಆರಂಭಿಸಿ, ಪ್ರತಿ ತಿಂಗಳು 45,000ರಿಂದ 90,000 ರೂಪಾಯಿ ಗಳಿಸಿ!

ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ, ಪ್ರತಿಯೊಬ್ಬರೂ ತಮ್ಮದೇ ಆದ ವ್ಯವಹಾರವನ್ನ ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಾರೆ. ನೀವು ಕೂಡ ಹೀಗೆಯ...