Search This Blog

Wednesday, January 1, 2025

ಶ್ರೀ ಸಿದ್ದೇಶ್ವರ ಸ್ವಾಮೀಜಿಯ ಜಯಂತೋತ್ಸವ ಜನವರಿ/2/ 2024

*ಜನೆವರಿ 02- ನಡೆದಾಡುವ ದೇವರು ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯರಾದಂತಹ ಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೆಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು:*
ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ. ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗಪ್ರಸಿದ್ದರಾಗಿದ್ದರು, ಹಾಗೂ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು. ಜೈನ ಧರ್ಮದಂತೆ ಆಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿಯಂದು ಇಚ್ಛಾಮರಣ ಹೊಂದಿದ್ದರು.
*#ಜನನ:*
ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಸಾಮಾನ್ಯ ರೈತ ಕುಟುಂಬದಲ್ಲಿ 1941 ಅಕ್ಟೋಬರ್ 21ರಂದು ಜನಿಸಿದರು . ಸಿದ್ದಗೊಂಡಪ್ಪ ಇವರ ಬಾಲ್ಯದ ಹೆಸರು.
*#ವಿದ್ಯಾಭ್ಯಾಸ:*
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ಏಳನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. 'ಬೆಳೆಯುವ ಪೈರು ಮೊಳಕೆಯಲ್ಲೇ' ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸು ಮಾಡಿದರು.
*#ಪ್ರವಚನ:*
ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಬೆಳೆಯಿತು. ಪೂಜ್ಯ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದರು. ಕರ್ನಾಟಕವಲ್ಲದೆ ಮಹಾರಾಷ್ಟ್ರದ ಪ್ರಮುಖ ನಗರಗಳಲ್ಲಿ ತಿಂಗಳುಗಟ್ಟಲೆ ಪ್ರವಚನ ನೀಡುತ್ತಿದ್ದರು. ಇವರ ಗಾಢ ಪ್ರಭಾವ ಸುತ್ತಮುತ್ತಲ ಜನರ ಮೇಲೆ ಉಂಟಾಗಿ ಕ್ರಮೇಣ ಶ್ರೀಗಳು ಗ್ರಾಮೀಣ ಪ್ರದೇಶದ ಮಕ್ಕಳು ವಿದ್ಯೆಗಾಗಿ ಕಷ್ಟಪಡುತ್ತಿದ್ದುದನ್ನು ಗಮನಿಸಿ ಅವರಿಗಾಗಿ ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸಿ ಅವರಿಗೆ ಊಟ, ವಸತಿಗಳಿಗೆ ವ್ಯವಸ್ಥೆ ಮಾಡಿದರು. ಇದರಿಂದಾಗಿ ಸಾವಿರಾರು ಮಕ್ಕಳು ವಿದ್ಯಾವಂತರಾದರು. ಹಾಗೆ ವಿದ್ಯೆ ಕಲಿಯಲು ಬಂದ ಸಾವಿರಾರು ಮಕ್ಕಳಲ್ಲಿ ಶ್ರೀ ಸಿದ್ದೇಶ್ವರರೂ ಒಬ್ಬರು.

ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಶ್ರೀ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬರುತ್ತಿದ್ದಾರೆ. ಸಿದ್ದೇಶ್ವರರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಾರೆ. ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಾರೆ.. ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತಿರುತ್ತಾರೆ. ಸೂಜಿಗಲ್ಲಿನಂತಹ ಸೆಳೆತ, ಅವರು ಭಾಷೆ,ಧಾಟಿ,ಪ್ರದಪ್ರಯೋಗ,ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುವರು. ಜೊತೆಗೆ ಕಲ್ಲು,ಮಣ್ಣು,ಗಿಡ,ಮರ,ಹೂ,ಹಕ್ಕು,ಪಕ್ಷಿ,ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ಅವರು ವಿವರಿಸುವ ರೀತಿ ಅದ್ಬುತವಾದುದು. ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರೂ ಅವರ ಯಾವ ಸಂಸ್ಥೆಗಳಿಗೂ ಆಶ್ರಮದ ಹೆಸರಾಗಲಿ, ಅವರ ಹೆಸರಾಗಲಿ ಇರುವುದಿಲ್ಲ ಎಂದರೆ ಆಶ್ಚರ್ಯವಲ್ಲವೆ? ಕೆರೆಯ ನೀರನ್ನು ಕೆರೆಗೆ ಚೆಲ್ಲಿ. ಎಂಬ ದಾಸ ವಾಣಿಯಂತೆ ನನ್ನದೇನಿದೆ,ಎಲ್ಲವೂ ಭಗವಂತನದು,ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು.ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರರು.
*#ವಿದಾಯ:*
ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಜನೆವರಿ 02,2023 ರಂದು ನಮ್ಮನ್ನು ಅಗಲಿದರು. 

#DeathAnniversary

No comments: