*🌺ಜನವರಿ - 03ಅಕ್ಷರದವ್ವ ಮಾತೆ* *ಸಾವಿತ್ರಿಬಾಯಿ ಫುಲೆ*
*ಅವರ ಜನ್ಮ ದಿನದ*
*ಶುಭಾಶಯಗಳು*
*ಅಕ್ಷರದವ್ವ ಸಾವಿತ್ರಿಬಾಯಿ ಫುಲೆ(೧೮೩೧-೧೮೯೭) ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು. ಖಾದಿ ಸೀರೆಯನ್ನೇ ಅವರು ಧರಿಸುತ್ತಿದ್ದರು.*
*ಸಾವಿತ್ರಿಬಾಯಿ ಫುಲೆ*
*ಜನನ, ಜೀವನ*
*ಬದಲಾಯಿಸಿ*
*ಸಾವಿತ್ರಿಬಾಯಿ ಫುಲೆ* *೧೮೩೧ರಲ್ಲಿ* *ಮಹಾರಾಷ್ಟ್ರದ ಸತಾರಜಿಲ್ಲೆಯ 'ನೈಗಾಂನ್'ನಲ್ಲಿ ಹುಟ್ಟಿದರು. ತಂದೆ ನೇವಸೆ ಪಾಟೀಲ. ಬಾಲ್ಯದಲ್ಲಿಯೇ ಸಾವಿತ್ರಿಬಾಯಿ ಫುಲೆ ಅವರು* *ಜ್ಯೋತಿಬಾಫುಲೆಯವರನ್ನು ಲಗ್ನವಾದರು.* *ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮಪಾಲು ಜ್ಯೋತಿ ಬಾ ಫುಲೆ ಅವರದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾಫುಲೆ ಅವರಿಗೆ ಸಲ್ಲಬೇಕು.*
*ವಿವಾಹ,* *ವಿದ್ಯಾಭ್ಯಾಸ*
*ಬದಲಾಯಿಸಿ*
*ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲಿ* *ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ ೮ ವರ್ಷ ವಯಸ್ಸು, ಜ್ಯೋತಿಬಾಫುಲೆ ಅವರಿಗೆ ೧೩ ವರ್ಷ ವಯಸ್ಸಾಗಿತ್ತು.* *ಸಾವಿತ್ರಿಬಾಯಿ ಅವರಿಗೆ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು.* *೧೮೪೭ರಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕಿಯ ತರಬೇತಿ ಪಡೆದರು. ಅವರಿಗೆ ೧೭ ವರ್ಷ. ಹೀಗಾಗಿ ಮಹಾರಾಷ್ಟ್ರದಲ್ಲಿ ತರಬೇತಿ ಆದ ಮೊದಲ ಶಿಕ್ಷಕಿಯಾದರು.*
*ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸುವ ಮೂಲಕ. ಶಿಕ್ಷಕಿ, ಸಂಚಾಲಕಿ,* *ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಫುಲೆ ಅವರಿಗೆ ನೆರವಾದರು.* *ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ಸೂಸಿದ್ದರು.*
*ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ,* *ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು,* *ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ. ಇವರು ಒಟ್ಟು ಶಾಲೆಗಳನ್ನು ಸ್ಥಾಪನೆ ಮಾಡುತ್ತಾರೆ.*
*ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ , ಬ್ರಿಟಿಷ್ ಸರಕಾರ ಇವರಿಗೆ *"ಇಂಡಿಯಾಸ್ ಫಸ್ಟ್ ಲೇಡಿ ಟೀಚರ್"* *ಎಂದು ಬಿರುದು ಕೂಡ ಕೊಟ್ಟಿದೆ. ಸ್ತ್ರೀಯರು ಕೂಡ ಪುರುಷರಂತೆ ಶಿಕ್ಷಣವನ್ನು ಪಡೆಯಬೇಕೆಂಬ ಮಹದಾಸೆಯಿಂದ ತಮಗೊದಗಿದ ಕಷ್ಟ - ಕಾರ್ಪಣ್ಯಗಳನ್ನು ಲೆಕ್ಕಿಸದೇ ಸ್ತ್ರೀ ಸಂಕುಲಕ್ಕೆ ಶೈಕ್ಷಣಿಕ ರಹದಾರಿಯನ್ನು ತೋರಿಸಿದರು.*
No comments:
Post a Comment