ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ..V Narayanan Appointed New Isro Chairman
( V Narayanan Appointed New Isro Chairman ) ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹಿರಿಯ ವಿಜ್ಞಾನಿ ವಿ.ನಾರಾಯಣನ್ ಅವರನ್ನು ಹೊಸ ಅಧ್ಯಕ್ಷರನ್ನಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯನ್ನಾಗಿ ಭಾರತ ಸರ್ಕಾರ ನೇಮಕ ಮಾಡಿದೆ.ಹಾಲಿ ಅಧ್ಯಕ್ಷ ಎಸ್.ಸೋಮನಾಥ್ ಅವರ ಅಧಿಕಾರಾವಧಿಯ ಕೊನೆಯ ದಿನವಾದ ಈ ತಿಂಗಳ 14ರಂದು ಅವರು ಅಧಿಕಾರ ಸ್ವೀಕರಿಸುವರು. ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿಯೂ ಈ ಕುರಿತು ಅಧಿಸೂಚನೆ ಹೊರಡಿಸಿದೆ.
ವಿ ನಾರಾಯಣನ್ 1984 ರಲ್ಲಿ ಇಸ್ರೋಗೆ ಸೇರ್ಪಡೆಗೊಂಡರು. ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ. ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ಪ್ರೊಪಲ್ಷನ್ನಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಅವರು GSLV Mk Ill ವಾಹನದ C25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.
ಇಸ್ರೋ ವಿಜ್ಞಾನಿ ಡಾ.ನಾರಾಯಣನ್ ಅವರಿಗೆ ಹಲವು ಪ್ರಶಸ್ತಿ, ಗೌರವಗಳು ಸಂದಿವೆ. ಇವುಗಳಲ್ಲಿ ಐಐಟಿ ಖರಗ್‌ಪುರದ ಬೆಳ್ಳಿ ಪದಕ, ಆಸ್ಟ್ರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ (ಎಎಸ್‌ಐ) ಯಿಂದ ಚಿನ್ನದ ಪದಕ ಮತ್ತು ಎನ್‌ಡಿಆರ್‌ಎಫ್‌ನಿಂದ ರಾಷ್ಟ್ರೀಯ ವಿನ್ಯಾಸ ಪ್ರಶಸ್ತಿ ಸೇರಿವೆ.
No comments:
Post a Comment